
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ನಡೆಯುತ್ತಿದ್ದಾಗ ಛಾವಣಿ ಕುಸಿದು ಬಿದ್ದ ಪರಿಣಾಮ ಆರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಗೊಂಡ ಪ್ರೇಮ್, ರಾಕೇಶ್, ಮಹೇಶ್, ಸುನಿತಾ ಮತ್ತು ಸತೀಶ್ ಸೇರಿದಂತೆ ಆರು ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಒಟ್ಟು 53 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಶಾಲೆಯ ಮೂರು ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.