
ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಅರೇಬಿಯನ್ ಸಮುದ್ರ ಹಾಗೂ ಕೇರಳದ ಮೇಲಿನ ವಾಯುಭಾರ ಬದಲಾವಣೆ ಹಾಗೂ ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದ್ದು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು ಮತ್ತು ಕೇರಳದ ಕೆಲವು ಭಾಗಗಳಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ಗುಡುಗು ಸಹಿತ ಭಾರೀ ಮಳೆ ಹಾಗೂ ಬಲವಾದ ಮೇಲ್ಮೈ ಗಾಳಿ ಬೀಳುವ ನಿರೀಕ್ಷೆಯಿದೆ.