
ಚಲಿಸುವ ರೈಲಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಕುಡಿದ ಮತ್ತಿನಲ್ಲಿದ್ದ ಆತನ ಅನುಚಿತ ವರ್ತನೆಯನ್ನು ಕಂಡು ಆಕ್ರೋಶಗೊಂಡ ಸಹ ಪ್ರಯಾಣಿಕರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಈ ವ್ಯಕ್ತಿಯ ವಿರುದ್ಧ ರೈಲಿನಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.