
ಪೌರಾಡಳಿತ ನಿರ್ದೇಶನಾಲಯ, ಇಎಸ್ಐ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಹುದ್ದೆಗಳಿಗೆ ನವೆಂಬರ್ 6, 7 ಮತ್ತು 14 ರಂದು ನಿರ್ದಿಷ್ಟ ಹಾಗೂ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗಳು ನಡೆಯಲಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು (0.25) ಅಂಕಗಳನ್ನು ಋಣಾತ್ಮಕ ಮೌಲ್ಯಮಾಪನವಾಗಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ.