
ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ 7,000 ಜನರಿಗೆ ಹೆಚ್‌ಐವಿ ಸೋಂಕು ತಗಲಿದೆ ಎಂಬ ವದಂತಿಯನ್ನು ಆರೋಗ್ಯ ಸಚಿವ ಯುಟಿ ಖಾದರ್ ತಳ್ಳಿಹಾಕಿದ್ದು, ಇದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ 5,53,453 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 3,091 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ರಾಜ್ಯದಲ್ಲಿ 2004ರಿಂದ ಇಲ್ಲಿಯವರೆಗೆ 39,028 ಸೋಂಕಿತರು ನೋಂದಾಯಿತರಾಗಿದ್ದು, ಸದ್ಯ 56,000 ಸೋಂಕಿತರು ಚಿಕಿತ್ಸಾ ವ್ಯಾಪ್ತಿಯಿಂದ ಹೊರಗಿದ್ದು ಅವರನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.