
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (KUDA) ನಿವೇಶನ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ 8.43 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿರುವ ಬೃಹತ್ ಹಗರಣ ಬೆಳಕಿಗೆ ಬಂದಿದೆ.
ಕಳೆದ 18 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ರವೀಂದ್ರ ಎಂಬಾತ ಪ್ರಾಧಿಕಾರದ ಹೆಸರಿನಲ್ಲಿ ಅನಧಿಕೃತ ಬ್ಯಾಂಕ್ ಖಾತೆ ಸೃಷ್ಟಿಸಿ ಈ ವಂಚನೆ ಎಸಗಿದ್ದಾನೆ.
ಪ್ರಕರಣದ ಕುರಿತು ಆಯುಕ್ತ ಶರಣಪ್ಪ ದೂರು ನೀಡಿದ್ದು, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರು ಅಧಿಕಾರಿಗಳು ಹಾಗೂ ಬ್ಯಾಂಕ್ ಸಿಬ್ಬಂದಿ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿ ತನಿಖೆಗೆ ಆದೇಶಿಸಿದ್ದಾರೆ.