
ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಬೆಂಗಳೂರಿನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆಗಸ್ಟ್ 24ರಂದು ಜಯಮಹಲ್ ರಸ್ತೆಯಲ್ಲಿರುವ ಅಧಿಕಾರಿಯ ಮನೆಯ ಬಾಗಿಲು ಒಡೆದು ಶೋಧ ನಡೆಸಲಾಗಿದ್ದು, ಅಧಿಕಾರಿ ಸದ್ಯ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಹಿಂದೆ ಕೆಪಿಎಸ್‌ಸಿ ಕಚೇರಿಯ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಪ್ರಕರಣದ ತನಿಖೆಯ ಭಾಗವಾಗಿ ಜ್ಞಾನೇಂದ್ರ ಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ.