
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಮಹಿಳಾ ಏಷ್ಯಾಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಉಭಯ ತಂಡಗಳು 17 ಬಾರಿ ಮುಖಾಮುಖಿಯಾಗಿದ್ದು, ಭಾರತ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಶೇ. 82ರಷ್ಟು ಮೇಲುಗೈ ಹೊಂದಿದೆ.
ದುಬೈ ಪಿಚ್ ಸ್ಪಿನ್ನರ್ಗಳಿಗೆ ಹೆಚ್ಚು ಸಹಕಾರಿಯಾಗಿದ್ದು, ಇಲ್ಲಿಯವರೆಗೆ ನಡೆದ 24 ಪಂದ್ಯಗಳಲ್ಲಿ ಸ್ಪಿನ್ನರ್ಗಳು ಶೇ. 57ರಷ್ಟು ವಿಕೆಟ್ಗಳನ್ನು ಪಡೆದಿದ್ದಾರೆ.