
ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸಿದ ಅರ್ನಾಬ್ ಚಂಡಮಾರುತವು ಕಾಕಿನಾಡ ಮತ್ತು ಪುದುಚೇರಿಯ ಯಾಣಂ ನಡುವೆ ಭಾರೀ ವಿನಾಶ ಸೃಷ್ಟಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕಾಕಿನಾಡ, ಕೋನಸೀಮಾ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಗಂಟೆಗೆ 125-135 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ ಬೀಸುತ್ತಿದ್ದು, ವಿಶಾಖಪಟ್ಟಣಂನಲ್ಲಿ 200.20 ಮಿ.ಮೀ ಮಳೆಯಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 63 ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ ತಗ್ಗು ಪ್ರದೇಶಗಳ ಸುಮಾರು 3,000 ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.