
ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಜುಲೈ ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಕಂಪನಿಯು ಸಿಎನ್‌ಜಿ, ಹೈಬ್ರಿಡ್ ಮತ್ತು ಇವಿ ವಾಹನಗಳ ಮಾರುಕಟ್ಟೆಯಲ್ಲಿ ಶೇ 55ರಷ್ಟು ಪಾಲು ಹೊಂದಿದ್ದು, ಇವಿ ವಿಭಾಗದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
2030ರ ವೇಳೆಗೆ ಭಾರತದ ಇವಿ ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಮೊದಲ ಸ್ಥಾನಕ್ಕೇರುವ ಗುರಿಯನ್ನು ಕಂಪನಿ ಹೊಂದಿದ್ದು, ಕರ್ನಾಟಕದಲ್ಲಿ ಸಿಎನ್‌ಜಿ ಕಾರುಗಳ ಮಾರುಕಟ್ಟೆಯಲ್ಲಿ ಶೇ 78ರಷ್ಟು ಪಾಲು ಹೊಂದಿದೆ.