
ದಸರಾ ರಜೆಯಲ್ಲೂ ಕೆಲವು ಖಾಸಗಿ ಶಾಲೆಗಳು ತರಗತಿಗಳನ್ನು ನಡೆಸುತ್ತಿರುವುದು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಶಿಕ್ಷಣ ಇಲಾಖೆಯು ಅಕ್ಟೋಬರ್ 3 ರಿಂದ 21 ರವರೆಗೆ 19 ದಿನಗಳ ದಸರಾ ರಜೆ ಘೋಷಿಸಿತ್ತು.
ಸರ್ಕಾರದ ಆದೇಶ ಉಲ್ಲಂಘಿಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ.