
ಮಧ್ಯಪ್ರದೇಶದ ರೇವಾ ಜಿಲ್ಲೆಯ ಗಾಂಧಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ 25 ವರ್ಷದ ಕಲ್ಪನಾ ಮಿಶ್ರಾ ಮತ್ತು ಅವರ ನವಜಾತ ಶಿಶು ಆಗಸ್ಟ್ 26ರಂದು ಮೃತಪಟ್ಟಿದ್ದಾರೆ.
ಆರೋಗ್ಯ ಸಚಿವ ರಾಜೇಂದ್ರ ಶುಕ್ಲಾ ಅವರ ಆದೇಶದ ಮೇರೆಗೆ ಕರ್ತವ್ಯದಲ್ಲಿದ್ದ ಸ್ತ್ರೀರೋಗ ತಜ್ಞೆ ಡಾ. ಸೋನಲ್ ಅಗರ್ವಾಲ್, ಅರಿವಳಿಕೆ ತಜ್ಞೆ ಡಾ. ನಿಧಿ ಪಾಂಡೆ ಹಾಗೂ ಇಬ್ಬರು ನರ್ಸ್ಗಳನ್ನು ಅಮಾನತುಗೊಳಿಸಲಾಗಿದೆ.
ಘಟನೆಯ ಕುರಿತು ತನಿಖೆ ನಡೆಸಲು 5 ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದ್ದು, 3 ದಿನಗಳೊಳಗೆ ವರದಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.