
ದುಬೈನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದು, ನಾಯಕಿ ಹರ್ಮನ್‌ಪ್ರೀತ್ ಕೌರ್ 150 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ನಾಯಕತ್ವ ವಹಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
ಪಾಕಿಸ್ತಾನವನ್ನು ಕೇವಲ 55 ರನ್‌ಗಳಿಗೆ ಕಟ್ಟಿಹಾಕಿದ ಭಾರತದ ಪರ ಶ್ರೀ ಚರಣಿ 3/7, ಪ್ರೇಮಾ ರಾವತ್ 3/9 ಮತ್ತು ದೀಪ್ತಿ ಶರ್ಮಾ 2/5 ವಿಕೆಟ್ ಪಡೆದು ಮಿಂಚಿದರು.
ಸತತ ಮೂರನೇ ಗೆಲುವಿನೊಂದಿಗೆ ಗ್ರೂಪ್ ಎ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಭಾರತ ತಂಡವು, ಸೆಪ್ಟೆಂಬರ್ 10ರಂದು ನಡೆಯಲಿರುವ ಸೆಮಿಫೈನಲ್ ಪಂದ್ಯಕ್ಕೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ.