
ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ ಗಂಟೆಗೆ 30 ರಿಂದ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ ಹಾಗೂ ವಿಜಯಪುರ ಸೇರಿದಂತೆ ಒಟ್ಟು 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.