
ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಮುಂದೂಡಲ್ಪಟ್ಟು 64 ದಿನಗಳಾದರೂ ಕಲಾಪ ಆರಂಭಿಸದಿರುವುದು ಖಂಡನೀಯ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾವುದೇ ಹೊಸ ಮಸೂದೆಯನ್ನು ಸಂಸತ್ತಿಗೆ ತರುವ ಮೊದಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಅಧ್ಯಯನ ಮಾಡಲು ಮತ್ತು ಅಭಿಪ್ರಾಯ ಹಂಚಿಕೊಳ್ಳಲು ಸಾಕಷ್ಟು ಸಮಯಾವಕಾಶ ನೀಡಬೇಕು ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.