
ಅಕ್ಟೋಬರ್ 22ರಂದು ದೆಹಲಿಗೆ ತೆರಳಿದ್ದ ಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳು, ಬಾಕಿ ಇರುವ ಸಂಪುಟ ಭರ್ತಿ ಮತ್ತು ನಿಗಮ ಮಂಡಳಿ ನೇಮಕದ ಬಗ್ಗೆ ಚರ್ಚೆ ನಡೆಸಿದ್ದಾರೆ.
ನಿಗಮ ಮಂಡಳಿ ಡೈರೆಕ್ಟರ್ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿ ಪಟ್ಟಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಿದೆ.
ಆದರೆ, ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಪಟ್ಟಿಯನ್ನು ಸದ್ಯಕ್ಕೆ ಪ್ರಕಟಿಸಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.