
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಆಂಥೋನಿ ರಾಜ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸಿಬಿಐಗೆ ಲೋಕಪಾಲ್ ಆದೇಶ ಹೊರಡಿಸಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರ ಪಾಸ್ಪೋರ್ಟ್ಗಳನ್ನು ಬಲವಂತವಾಗಿ ಪಡೆದು ಡ್ಯೂಟಿ ಫ್ರೀ ಮದ್ಯದ ಅಂಗಡಿಯಿಂದ ತಮ್ಮದೇ ಕಾರ್ಡ್ಗಳ ಮೂಲಕ ಅಕ್ರಮವಾಗಿ ಮದ್ಯ ಖರೀದಿಸಿ ತೆರಿಗೆ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಪ್ರಾಥಮಿಕ ತನಿಖಾ ವರದಿಯನ್ನು ಸಿವಿಸಿಯು 2026ರ ಜುಲೈ 28ರಂದು ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ನಡೆಯಲಿದೆ.