
ಭಾರತವು ಪ್ರಪಂಚದ 4ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದ್ದು, ಇದರ ಕೀರ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲಬೇಕು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಭವನ ಮತ್ತು ಅನುಭವ ಕೇಂದ್ರವನ್ನು ಅವರು ಲೋಕಾರ್ಪಣೆಗೊಳಿಸಿದರು.
ರಾಜ್ಯದ 102 ತಾಲ್ಲೂಕುಗಳಲ್ಲಿ ಬರಪೀಡಿತ ಪ್ರದೇಶಗಳನ್ನು ಗುರುತಿಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬರ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.