
ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆಯಾಗಿದ್ದು, ಗ್ರಾಹಕರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
ಪ್ರತಿ ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 230 ರೂಪಾಯಿ ಇಳಿಕೆಯಾಗಿ 13,765 ರೂಪಾಯಿಗೆ ತಲುಪಿದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 15,017 ರೂಪಾಯಿಯಾಗಿದೆ.
ಅದೇ ರೀತಿ ಬೆಳ್ಳಿ ಬೆಲೆಯೂ ಕುಸಿತ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 2,48,000 ರೂಪಾಯಿಗಳಷ್ಟಿದೆ.