
ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದ ಗೈರಾಂಗ್ ಗಡಿಯಲ್ಲಿ ಸಂಭವಿಸಿದ ಭಾರಿ ಭೂಕುಸಿತ ಮತ್ತು ಹಿಮಕುಸಿತದಿಂದ ಕನಿಷ್ಠ 16 ಜನರು ಮೃತಪಟ್ಟಿದ್ದು, 546 ಮಂದಿ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದವರಲ್ಲಿ ಭಾರತದ 49 ಯಾತ್ರಿಕರು ಸೇರಿದಂತೆ ಒಟ್ಟು 23 ದೇಶಗಳ 261 ವಿದೇಶಿ ಪ್ರಜೆಗಳು ಸೇರಿದ್ದಾರೆ ಎಂದು ಚೀನಾ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಪರಿಸ್ಥಿತಿಯ ಗಂಭೀರತೆ ಪರಿಗಣಿಸಿ ಅಧ್ಯಕ್ಷ ಷಿ ಜಿನ್‌ಪಿಂಗ್ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲು ಆದೇಶಿಸಿದ್ದು, ಪ್ರಧಾನಿ ಲಿ ಕಿಯಾಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯದ ನೇತೃತ್ವ ವಹಿಸಿದ್ದಾರೆ.