
ಭಾರತೀಯ ಹವಾಮಾನ ಇಲಾಖೆಯು ಸೆಪ್ಟೆಂಬರ್ 10ರವರೆಗೆ ಉತ್ತರ ಮತ್ತು ಪೂರ್ವ ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ.
ದಕ್ಷಿಣ ಭಾರತದಲ್ಲಿ ಪರಿಸ್ಥಿತಿ ಭಿನ್ನವಾಗಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು, ತೆಲಂಗಾಣದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.