
ಭದ್ರಾ ಡ್ಯಾಂನಿಂದ ಮೇಲ್ದಂಡೆ ಯೋಜನೆಗೆ ನೀರು ಬಿಡುಗಡೆ ಆದೇಶ ಮತ್ತು ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕರೆ ನೀಡಿದ್ದ ದಾವಣಗೆರೆ ಬಂದ್ ಇಂದು ನಡೆಯಿತು.
ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಮುಖಂಡ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಹದಡಿ ರಸ್ತೆ ತಡೆದು, ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದ್ದು, ನಗರದ ಸಿದ್ದಗಂಗಾ ಶಾಲೆ ಸೇರಿದಂತೆ ಕೆಲ ಶಾಲೆಗಳಿಗೆ ರಜೆ ಘೋಷಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.