
ರಾಜ್ಯದ ವಿವಿಧ ಇಲಾಖೆಗಳಲ್ಲಿನ SC/ST ಬ್ಯಾಕ್ಲಾಗ್ ಹುದ್ದೆಗಳನ್ನು ಪ್ರತ್ಯೇಕ ಅಧಿಸೂಚನೆ ಮೂಲಕ ಭರ್ತಿ ಮಾಡಲು ಸಂಪುಟ ಉಪಸಮಿತಿ ನಿರ್ಧರಿಸಿದೆ.
ಪ್ರಸ್ತುತ ನಡೆಯುತ್ತಿರುವ ನೇಮಕಾತಿಗಳೊಂದಿಗೆ ಈ ಹುದ್ದೆಗಳನ್ನು ವಿಲೀನಗೊಳಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ಅನುದಾನ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಲಾಗಿದೆ.