
ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗದ ಆಗುಂಬೆಯಲ್ಲಿ 9 ಸೆಂ.ಮೀ., ಶೃಂಗೇರಿಯಲ್ಲಿ 6 ಸೆಂ.ಮೀ. ಹಾಗೂ ಬೆಳ್ತಂಗಡಿಯಲ್ಲಿ 5 ಸೆಂ.ಮೀ. ಮಳೆ ದಾಖಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.