
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ.
ಅಂಡಮಾನ್‌ನ ಬ್ಯಾಂಬೂ ಫ್ಲಾಟ್‌ನಿಂದ ಉತ್ತರ-ವಾಯುವ್ಯಕ್ಕೆ ಸುಮಾರು 218 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ.
ಭೂಕಂಪನದಿಂದ ಯಾವುದೇ ಆಸ್ತಿಪಾಸ್ತಿ ಅಥವಾ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಅಮೆರಿಕದ ಭೌಗೋಳಿಕ ಸಮೀಕ್ಷೆ ತಿಳಿಸಿದೆ.