
ಪ್ರಧಾನಿ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯ ಮೈಲಿಗಲ್ಲು ಮತ್ತು ಸಾಧನೆಗಳನ್ನು ಸ್ಮರಿಸಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ 'ಸೇವಾ ಸಂಕಲ್ಪ' ಅಭಿಯಾನ ನಡೆಸಲಾಗುವುದು ಎಂದು ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಕಳೆದ 25 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಒಂದೂ ರಜೆ ಪಡೆಯದೆ ರಾಷ್ಟ್ರದ ಸೇವೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ನಡ್ಡಾ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
ಈ ಒಂದು ತಿಂಗಳ ಅವಧಿಯಲ್ಲಿ ದೇಶಾದ್ಯಂತ 12 ಪ್ರಮುಖ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅಕ್ಟೋಬರ್ 17 ರಂದು ಸುಶಾಸನ ಸಂವಾದ ನಡೆಯಲಿದೆ.