
ಮಕ್ಕಳ ಕಸ್ಟಡಿ ವಿಚಾರಣೆಗಳಲ್ಲಿ ಇನ್ನು ಮುಂದೆ 'ವಿಸಿಟೇಶನ್' ಪದದ ಬದಲಿಗೆ 'ಪೇರೆಂಟಿಂಗ್ ಟೈಮ್' ಎಂಬ ಮಾನವೀಯ ಪದವನ್ನು ಕಡ್ಡಾಯವಾಗಿ ಬಳಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ರಾಜ್ಯದ ಎಲ್ಲಾ ಕೌಟುಂಬಿಕ ನ್ಯಾಯಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಲಾಗಿದೆ.
ಕೌಟುಂಬಿಕ ನ್ಯಾಯಾಲಯಗಳು ಯಾಂತ್ರಿಕವಾಗಿ ಆದೇಶ ಹೊರಡಿಸಬಾರದು ಎಂದು ತಿಳಿಸಿದ ನ್ಯಾಯಪೀಠ, ಈ ಪ್ರಕರಣದಲ್ಲಿ ಎರಡು ದಿನಗಳ ಕಾಲ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪೇರೆಂಟಿಂಗ್ ಟೈಮ್ ನೀಡಿದೆ.