
ಕರ್ನಾಟಕದ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ. 7.5 ಮತ್ತು ಗ್ರಾಮೀಣ ಪ್ರದೇಶದ ಇತರ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ ಕಲ್ಪಿಸುವ ಕರಡು ನಿಯಮವನ್ನು ಸರ್ಕಾರ ಪ್ರಕಟಿಸಿದೆ.
1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದ್ದು, ಉನ್ನತ ಶಿಕ್ಷಣ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಸಾರ್ವಜನಿಕರು ಈ ಕರಡು ನಿಯಮದ ಕುರಿತು ತಮ್ಮ ಆಕ್ಷೇಪಣೆಗಳನ್ನು ಅಧಿಸೂಚನೆ ಪ್ರಕಟವಾದ 15 ದಿನಗಳ ಒಳಗಾಗಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.