
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯ ಸರ್ಕಾರವು ಎರಡನೇ ಬಾರಿಗೆ ಅಮಾನತುಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರು ಅಧಿಕೃತವಾಗಿ ಸಹಿ ಹಾಕಿದ್ದಾರೆ.
ಜುಲೈ 13ರಂದು ನೀಡಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದ ನಂತರ, ಆಗಸ್ಟ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಮಾನತಿಗೆ ಶಿಫಾರಸು ಮಾಡಲಾಗಿತ್ತು.
ರಾಜ್ಯಪಾಲರ ಅಂಕಿತ ಬಿದ್ದಿದ್ದು, ಅಮಾನತು ಆದೇಶದ ಅಧಿಕೃತ ಪ್ರತಿಯು ಶೀಘ್ರವೇ ಹೊರಬೀಳಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.