
ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಯನ್ನು ಇಡಿ ತೀವ್ರಗೊಳಿಸಿದ್ದು, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಮತ್ತು ಅಭ್ಯರ್ಥಿಗಳಿಗೆ ರೆಸಾರ್ಟ್‌ನಲ್ಲಿ ತರಬೇತಿ ನೀಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಇಡಿ ಅಧಿಕಾರಿಗಳು ಅಭ್ಯರ್ಥಿಗಳ ನಿವಾಸದ ಮೇಲೆ ದಾಳಿ ನಡೆಸಿ ಪ್ರಶ್ನೆಗಳನ್ನು ಕೇಳಿ ಪರೀಕ್ಷೆ ನಡೆಸಿದ್ದಾರೆ ಎಂದು ಅಭ್ಯರ್ಥಿಗಳ ಪರ ವಕೀಲ ರಜತ್ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಕೆಪಿಎಸ್‌ಸಿ ಅಕ್ರಮಗಳ ಬಗ್ಗೆ ಪೊಲೀಸರ ತನಿಖಾ ವರದಿಯನ್ನು ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದೆ.