
ಕರ್ನಾಟಕದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿದ್ದರೂ ಖಾತೆ ಹಂಚಿಕೆಯಾಗದಿರುವುದನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ಖಾತೆ ಹಂಚಿಕೆಗಾಗಿ ದೆಹಲಿಯ ಅನುಮತಿಗಾಗಿ ಕಾಯುತ್ತಿರುವುದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯಲ್ಲಿ ಹೊಸದಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಬೇಕೆಂಬ ಅವೈಜ್ಞಾನಿಕ ನಿಯಮವನ್ನು ರದ್ದುಗೊಳಿಸುವಂತೆಯೂ ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.