
ಬೆಂಗಳೂರಿನ ಕಗ್ಗದಾಸಪುರದಲ್ಲಿ ತಡರಾತ್ರಿ ಫುಡ್ ಡೆಲಿವರಿ ಸಿಬ್ಬಂದಿಯನ್ನು ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಜುಲೈ 30ರಂದು ನಡೆದ ಘಟನೆಯಲ್ಲಿ ಆರೋಪಿಗಳಿಂದ ಒಂದು ಮೊಬೈಲ್ ಫೋನ್ ಮತ್ತು 1.30 ಲಕ್ಷ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತರು ನಗರದ ವಿವಿಧ ಭಾಗಗಳಲ್ಲಿ ರಾತ್ರಿ ವೇಳೆ ಒಂಟಿಯಾಗಿ ಸಂಚರಿಸುವ ಡೆಲಿವರಿ ಬಾಯ್ಗಳನ್ನು ಗುರಿಯಾಗಿಸಿಕೊಂಡು ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.