
ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹12,076 ಕೋಟಿ ನಿವ್ವಳ ಲಾಭ ದಾಖಲಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ನಿಗಮವು ₹10,053 ಕೋಟಿ ಲಾಭ ಗಳಿಸಿದ್ದು, ಈ ಬಾರಿ ಶೇ 20ರಷ್ಟು ಪ್ರಗತಿಯನ್ನು ಸಾಧಿಸಿದೆ ಎಂದು ಕಂಪನಿ ತಿಳಿಸಿದೆ.
ಎಲ್ಐಸಿಯ ಒಟ್ಟು ವರಮಾನವು ಈ ಅವಧಿಯಲ್ಲಿ ₹2.39 ಲಕ್ಷ ಕೋಟಿಯಿಂದ ₹2.62 ಲಕ್ಷ ಕೋಟಿಗೆ ಏರಿಕೆಯಾಗಿದೆ.