
ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ, ನೊಯ್ಡಾ ಮ್ಯಾಜಿಸ್ಟ್ರೇಟ್ ವಿದ್ಯಾರ್ಥಿಯೊಬ್ಬನಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಗೌತಮ ಬುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿ ಅಕ್ಷತ್ ತ್ರಿಪಾಠಿಗೆ ಸೆಪ್ಟೆಂಬರ್ 4ರಂದು 5 ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್ ನೀಡುವಂತೆ ಮ್ಯಾಜಿಸ್ಟ್ರೇಟ್ ನೋಟಿಸ್ ನೀಡಿದ್ದು, ನಂತರ ಅದನ್ನು ಹಿಂಪಡೆಯಲಾಗಿದೆ.
ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಮ್ಯಾಜಿಸ್ಟ್ರೇಟ್ ವಿರುದ್ಧ ಸಿಜೆಐ ಸೂರ್ಯ ಕಾಂತ್ ನೇತೃತ್ವದ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಲಿಖಿತ ವಿವರಣೆ ನೀಡುವಂತೆ ಆದೇಶಿಸಿದೆ.