
ಕರ್ನೂಲ್ ಜಿಲ್ಲೆಯ ದೇವಗರಗಟ್ಟು ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಕಟ್ಟಿಗೆ ಬಡಿದಾಟದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 32 ವರ್ಷದ ಯುವಕ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 18 ಜನರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಗುರುತಿಸಿದ್ದಾರೆ.