
ಚಾಮರಾಜನಗರದ ಕಾವೇರಿ ವನ್ಯಜೀವಿಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಕುಮಾರ್, ಆಂಥೋಣಿಸ್ವಾಮಿ ಮತ್ತು ಪೀಟರ್ ಎಂಬ ಮೂವರು ಮೃತಪಟ್ಟಿದ್ದಾರೆ.
ಬೇಟೆಗಾರರು ಅರಣ್ಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದಾಗ, ಆತ್ಮರಕ್ಷಣೆಗಾಗಿ ಸಿಬ್ಬಂದಿ ನಡೆಸಿದ ಕೌಂಟರ್ ಫೈರಿಂಗ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯ ನಂತರ ಆಕ್ರೋಶಗೊಂಡ ಮೃತರ ಸಂಬಂಧಿಕರು ಹನೂರು ತಾಲೂಕಿನ ಶಾಗ್ಯ DRFO ಕಚೇರಿಯನ್ನು ಧ್ವಂಸಗೊಳಿಸಿದ್ದು, ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.