
ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಸರ್ಕಾರಿ ಜಾಗ ಅತಿಕ್ರಮಣದ ನೆಪದಲ್ಲಿ ಮಸೀದಿಯ ಭಾಗವನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿರುವುದನ್ನು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ತೀವ್ರವಾಗಿ ಖಂಡಿಸಿದ್ದಾರೆ.
ಜುಲೈ 17ರಂದು ನಗರ ಮ್ಯಾಜಿಸ್ಟ್ರೇಟ್ ಕೋರ್ಟ್ ಕಟ್ಟಡ ತೆರವುಗೊಳಿಸಲು ಮತ್ತು 6.41 ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಆದೇಶಿಸಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಡಿಐಜಿ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.
ಮಸೀದಿ ಕಮಿಟಿಯು 1911ರ ದಾಖಲೆಗಳನ್ನು ಒದಗಿಸಿ ಇದು ಶತಮಾನದಷ್ಟು ಹಳೆಯದು ಎಂದು ವಾದಿಸುತ್ತಿದ್ದು, ಈ ವಿವಾದದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರಿ ಪ್ರಮಾಣದ ಪಿಎಸಿ ಮತ್ತು ಆರ್‌ಎಎಫ್ ಪಡೆಗಳನ್ನು ನಿಯೋಜಿಸಲಾಗಿದೆ.