
ಉಕ್ಕು ತಯಾರಿಕಾ ಸಂಸ್ಥೆಯಾದ ಜಿಂದಾಲ್ ಸಮೂಹವು ಕರ್ನಾಟಕದಲ್ಲಿ ಮುಂದಿನ ಐದು ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಬಂಡವಾಳ ಹೂಡಿಕೆ ಮಾಡಲಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಮುಂಬೈನಲ್ಲಿ ನಡೆದ ರೋಡ್ ಶೋನಲ್ಲಿ ಜಿಂದಾಲ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಅವರೊಂದಿಗೆ ಚರ್ಚಿಸಿದ ಬಳಿಕ, ಜಿಂದಾಲ್ ಸಮೂಹವು ಈಗಾಗಲೇ ರಾಜ್ಯದಲ್ಲಿ 1.30 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಎಂದು ಸಚಿವರು ಹೇಳಿದ್ದಾರೆ.
ಮತ್ತೊಂದೆಡೆ ಎಲ್ ಅಂಡ್ ಟಿ ಕಂಪನಿಯು ಬೆಂಗಳೂರಿನಲ್ಲಿ ಜಾಗತಿಕ ಮಾರುಕಟ್ಟೆಗೆ ಅಗತ್ಯವಿರುವ ಚಿಪ್ ವಿನ್ಯಾಸ ಸ್ಥಾವರವನ್ನು ಸ್ಥಾಪಿಸಲು ಒಲವು ತೋರಿದೆ ಎಂದು ಕೈಗಾರಿಕಾ ಸಚಿವರು ಪ್ರಕಟಿಸಿದ್ದಾರೆ.