
ಬಾಲಿವುಡ್ ನಟರಿಗೆ ಬೆದರಿಕೆ ಹಾಕಿ ಸುಲಿಗೆ ಜಾಲ ನಡೆಸುತ್ತಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆಪ್ತ ಸಹಚರ ಹರಿಚಂದ್ ಜಾಟ್ ಅಲಿಯಾಸ್ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಪೊಲೀಸ್ ವಿಶೇಷ ದಳ ಮತ್ತು ಹರಿಯಾಣ ಎಸ್‌ಟಿಎಫ್ ನೀಡಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆದಿದ್ದು, ಮುಂಬೈನಲ್ಲಿ ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆಯನ್ನು ಬಾಕ್ಸರ್ ಹೊತ್ತುಕೊಂಡಿದ್ದ.
ಫೆಬ್ರವರಿಯಲ್ಲಿ ನಟ ರಣವೀರ್ ಸಿಂಗ್‌ಗೆ 10 ಕೋಟಿ ರೂಪಾಯಿ ಸುಲಿಗೆ ಹಣಕ್ಕೆ ಬೇಡಿಕೆಯಿಟ್ಟು ಬೆದರಿಕೆ ಹಾಕಿದ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.