
ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಸರ್ಕಾರ 7ನೇ ಬಾರಿಗೆ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ತಿರಸ್ಕರಿಸಿದೆ.
ಈ ಅಧಿಸೂಚನೆಯು ರಾಜ್ಯದ 1,576 ಗ್ರಾಮಗಳ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ಒಳಗೊಂಡಿದ್ದು, ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಇದರಲ್ಲಿ ಸೇರಿವೆ.
ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಈ ವರದಿಯನ್ನು ಜಾರಿಗೆ ತರಲು ಅವಕಾಶ ನೀಡುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದು, ಮಲೆನಾಡಿನ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.