
ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಲಖನೌ ಮನೆಯ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.
ತಂದೆಯ ಅನಾರೋಗ್ಯದ ನೆಪವೊಡ್ಡಿ ಆಗಸ್ಟ್ 19ರಂದು ರಜೆ ಪಡೆದಿದ್ದ ಜ್ಞಾನೇಂದ್ರ ಕುಮಾರ್, ಇಡಿ ದಾಳಿಯ ಸುಳಿವು ಸಿಗುತ್ತಿದ್ದಂತೆ ದಾಖಲೆಗಳೊಂದಿಗೆ ನಾಪತ್ತೆಯಾಗಿದ್ದಾರೆ.
ಲಖನೌ ಮನೆಯಲ್ಲಿ ಅಧಿಕಾರಿ ಸಿಗದ ಕಾರಣ, ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ.