
ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗವು ಆಗಸ್ಟ್ 17ರವರೆಗೆ ವಿಸ್ತರಿಸಿದ್ದು, ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಆಗಸ್ಟ್ 24ರಂದು ಮೊದಲ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಸಾರ್ವಜನಿಕರು ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿರುತ್ತದೆ.
ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.