
ಕೊಚ್ಚಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್ ಡಿಪ್ಕೆ, ಮುಂಬರುವ 2029ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಸೋಲಲಿದೆ ಎಂದು ಭವಿಷ್ಯ ನುಡಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹಾಗೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರವು ಜನರ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಚುನಾವಣಾ ವ್ಯವಸ್ಥೆಯನ್ನು ನಿಯಂತ್ರಿಸಲು ಯತ್ನಿಸುತ್ತಿದೆ ಎಂದು ಅವರು ಸಭೆಯಲ್ಲಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.