
ಪಶ್ಚಿಮ ಏಷ್ಯಾ ಯುದ್ಧ ನಿಲ್ಲಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರಿಗೆ ಪಾಕಿಸ್ತಾನಕ್ಕೆ ಆಹ್ವಾನ ನೀಡಿದ್ದಾರೆ.
ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್ ಅವರಿಗೂ ಪಾಕ್ ಸ್ಪೀಕರ್ ಅಯಾಜ್ ಸಾದಿಕ್ ಆಹ್ವಾನ ನೀಡಿದ್ದು, ಈ ಬಗ್ಗೆ ಪಾಕ್ ವಿದೇಶಾಂಗ ಸಚಿವಾಲಯ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಈ ಆಹ್ವಾನಕ್ಕೆ ಇರಾನ್ ಕಡೆಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿಯಾಗಿದೆ.