
ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 200 ಮಿಲಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.