
80ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ಸಿಸಿಬಿ ಎಸಿಪಿ ಹೆಚ್.ಎನ್. ಧರ್ಮೇಂದ್ರ ಅವರಿಗೆ 'ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ' ಲಭಿಸಿದ್ದು, ಉಳಿದ 16 ಮಂದಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ.
ಪದಕ ಪುರಸ್ಕೃತರಲ್ಲಿ ಎಸ್ಪಿ ಸಾರಾ ಫಾತಿಮಾ, ಕಮಾಂಡೆಂಟ್ ಥಾಮಸ್ ಮ್ಯಾಥ್ಯೂ ಸೇರಿದಂತೆ ವಿವಿಧ ಜಿಲ್ಲೆಗಳ ಅಧಿಕಾರಿಗಳು ಮತ್ತು ಹೆಡ್ ಕಾನ್ಸ್ಟೇಬಲ್ಗಳು ಸೇರಿದ್ದಾರೆ.