
ನೆದರ್ಲ್ಯಾಂಡ್ಸ್‌ನ ವ್ಯಾಗನರ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 4-2 ಗೋಲುಗಳ ಅಂತರದಿಂದ ಸೋಲನುಭವಿಸಿ ಮುಂದಿನ ಹಂತದ ಹಾದಿಯನ್ನು ಕಠಿಣಗೊಳಿಸಿಕೊಂಡಿದೆ.
ಪೂಲ್ ‘ಡಿ’ ಅಂಕಪಟ್ಟಿಯಲ್ಲಿ ಇಂಗ್ಲೆಂಡ್ 6 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಭಾರತ 3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಮುಂದಿನ ಹಂತಕ್ಕೇರಲು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಿದೆ.
ಬುಧವಾರ ನಡೆಯಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದರೆ ನೇರವಾಗಿ ಎರಡನೇ ಹಂತಕ್ಕೆ ಪ್ರವೇಶಿಸಲಿದೆ, ಒಂದು ವೇಳೆ ಸೋತರೆ ಟೂರ್ನಿಯ ಮುಖ್ಯ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.