
ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ ಒಟ್ಟು 18 ತಹಶೀಲ್ದಾರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಕೆ. ನರಸಿಂಹಮೂರ್ತಿ ಅವರು ಈ ವರ್ಗಾವಣೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಧಿಕಾರಿಗಳು ತಕ್ಷಣವೇ ಹೊಸ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಲಾಗಿದೆ.
ವರ್ಗಾವಣೆಗೊಂಡವರಲ್ಲಿ ಸಂಗಮೇಶ ಜಿಡಗ, ಎಂ.ಆರ್. ಷಣ್ಮುಖ, ಶಾರದಾ ಬಿರಾದಾರ ಸೇರಿದಂತೆ ಹಲವು ಅಧಿಕಾರಿಗಳಿದ್ದು, ಇವರು ತಮ್ಮ ಕಾರ್ಯಭಾರ ವರದಿಯನ್ನು ಇ-ಮೇಲ್ ಮೂಲಕ ಸಲ್ಲಿಸಬೇಕಿದೆ.