
ಕೊಲ್ಕತ್ತಾದ ಗಿರೀಶ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಶನಿವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಒಂದು ಮಗು ಹಾಗೂ ಮಹಿಳೆಯರು ಸೇರಿ ಒಟ್ಟು 17 ಮಂದಿ ಮೃತಪಟ್ಟಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ದುರಂತದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಿಗದಿಯಾಗಿದ್ದ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಮುಂದೂಡಿದ್ದು, ಗಾಯಾಳುಗಳನ್ನು ಭೇಟಿಯಾಗಿದ್ದಾರೆ.