
ಸಾರ್ವಜನಿಕರಿಗೆ ಮತ್ತು ಸಹಕಾರಿಗಳಿಗೆ ಆರೋಗ್ಯ ಹಾಗೂ ಶೈಕ್ಷಣಿಕ ಅನುಕೂಲ ಕಲ್ಪಿಸಲು ಎಚ್.ಡಿ.ಕೋಟೆ ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಹಿಂಭಾಗದ ನಾಲ್ಕು ಎಕರೆ ಜಮೀನಿನಲ್ಲಿ ಸಹಕಾರಿ ಆಸ್ಪತ್ರೆ ಮತ್ತು ಶಾಲೆ ನಿರ್ಮಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ ಹಿರೇಹಳ್ಳಿ ಸೋಮೇಶ್ ತಿಳಿಸಿದ್ದಾರೆ.
ಶಾಸಕ ಅನಿಲ್ ಚಿಕ್ಕಮಾದು ಅವರ ಮೂಲಕ ಸರ್ಕಾರದ ಅನುಮತಿಗಾಗಿ ಮನವಿ ಸಲ್ಲಿಸಲಾಗುವುದು ಎಂದು ಟಿಎಪಿಸಿಎಂಎಸ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಲಾಗಿದೆ.
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಉತ್ತಮ ವಹಿವಾಟು ನಡೆಸಿರುವ ಸಂಘವು ಪ್ರಸ್ತುತ ಸಾಲಿನಲ್ಲಿ ₹92,85,000 ವಹಿವಾಟು ನಡೆಸಿ ₹27 ಲಕ್ಷ ಲಾಭ ಪಡೆದುಕೊಂಡಿದೆ.